ಬಾರ್ ಅಸೋಸಿಯೇಷನ್: ವಕೀಲರ ಮಾಹಿತಿ ಪುಸ್ತಕ ಬಿಡುಗಡೆ


    ಕುಂದಾಪುರ: ಇಲ್ಲಿನ ಬಾರ್ ಅಸೋಸಿಯೇಷನ್ ವತಿಯಿಂದ ವಕೀಲರುಗಳ ಕುರಿತಾಗಿ ಮಾಹಿತಿ ಕಲೆ ಹಾಕಿರುವ ಕೈಪಿಡಿಯನ್ನು ಇತ್ತಿಚೆಗೆ ಬಿಡುಗಡೆಗೊಳಿಸಲಾಯಿತು. ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಸ್ಟಿಸ್ ನರೇಂದ್ರ ಕುಮಾರ್ ಗುಣಕಿ ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಎ.ಬಿ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು,
 ವಕೀಲರ  ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಕಾಳಾವರ ಉದಯ ಶೆಟ್ಟಿ, ಕುಂದಾಪುರ ತ್ವರಿತ ವಿಲೇವಾರಿ ನ್ಯಾಯಾಲಯದ ಪೀಠಾಸೀನಾಧಿಕಾರಿಣಿ ಕಲ್ಪನಾ ಎಮ್. ಕುಲಕಣರ್ಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಶ್ರೀಮತಿ ನಿರ್ಮಲಾದೇವಿ ಮುಖ್ಯ ಅತಿಥಿಗಳಾಗಿದ್ದರು. 
ಕುಂದಾಪುರ ಪ್ರಧಾನ ಸಿವಿಲ್ ನ್ಯಾಯಾಧೀಶೆಯಾದ ಅನುಪಮಾ ಲಕ್ಷ್ಮೀ,  ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಧೀಶೆ ವಿಜೇತ ಪಿಂಕಿ ಡೇಸಾ, ಹಾಗೂ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಶ್ರೀಮತಿ ಶುಭಾ ಉಪಸ್ಥಿತರಿದ್ದರು.
ಕುಂದಾಪುರ ವಕೀಲರ ಸಂಘದ ನಿಕಟ ಪೂರ್ವ ಪ್ರಧಾನ ಕಾರ್ಯದಶರ್ಿ ಬನ್ನಾಡಿ ಸೋಮನಾಥ ಹೆಗ್ಡೆ ಸ್ವಾಗತಿಸಿ, ಪ್ರಧಾನ ಕಾರ್ಯದಶರ್ಿ ಕೆ.ಸಿ. ಶೆಟ್ಟಿ ವಂದಿಸಿದರು. ನಿಕಟ ಪೂರ್ವ ಉಪಾಧ್ಯಕ್ಷರಾದ ರಾಘವೇಂದ್ರ ಚರಣ್ ನಾವಡ ಕಾರ್ಯಕ್ರಮ ನಿರ್ವಹಿಸಿದರು 
ನಿಮ್ಮ ಪ್ರತಿಕ್ರಿಯೆ ಬರೆಯಿರಿ
 ಕುಂದಾಪ್ರ.ಕಾಂ> editor@kundapra.com