ನಾವುಂದ: ಸುಗಮ ಸಂಗೀತ ಕಾರ್ಯಕ್ರಮ

ಕುಂದಾಪುರ:  ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಪ್ರಾಯೋಜಿತ ಸುಗಮ ಸಂಗೀತ ಕಾರ್ಯಕ್ರಮ ಉದಯವಾಣಿ ವರದಿಗಾರ, ಆಕಾಶವಾಣಿ ಕಲಾವಿದ ಚಂದ್ರ ಕೆ. ಹೆಮ್ಮಾಡಿ ಮತ್ತು ಬಳಗದವರಿಂದ ಇತ್ತಿಚೆಗೆ ನಾವುಂದ ಸರಕಾರಿ ಪದವಿಪೂರ್ವ ಕಾಲೇಜು ಸಭಾಭವನದಲ್ಲಿ ಜರುಗಿತು. 
      ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಲೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಸ್ವಾದಿಸುವ ಮೂಲಕ ವಿದ್ಯಾಥರ್ಿಗಳು ತಮ್ಮಲ್ಲಿರುವ ಕಲಾಪ್ರತಿಭೆಗಳ ಬೆಳವಣಿಗೆಗೆ ಉತ್ತಮ ಪ್ರೇರಣೆಯನ್ನು ಪಡೆಯುವಂತೆ ಕಿವಿಮಾತು ಹೇಳಿದರು.
      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಪೂಜಾರಿ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಪೋಷಿಸುವಂತಹ ಕಾರ್ಯಕ್ರಮಗಳಿಂದ ಶಾಲಾಮಕ್ಕಳಿಗೆ ಉತ್ತಮ ಪ್ರೋತ್ಸಾಹ ಸಿಗುವಂತಾಗಲಿ ಎಂದರು.
       ಮುಖ್ಯ ಅತಿಥಿ ತಾಲೂಕು ಪಂಚಾಯತ್ ಸದಸ್ಯ ಮಹೇಂದ್ರ ಪೂಜಾರಿ, ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷ, ಪತ್ರಕರ್ತ ಎಸ್. ಜನಾರ್ದನ, ಹೇರೂರು ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ್ಕುಮಾರ್ ಶೆಟ್ಟಿ, ಯಳಜಿತ್ ಸಿದ್ಧಿವಿನಾಯಕ ಸಾಂಸ್ಕೃತಿಕ ಸಂಘದ ಸಂಚಾಲಕ ಮಂಗೇಶ್ ಶೆಣೈ, ನಾವುಂದ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಚಂದ್ರಶೇಖರಪ್ಪ, ಉಪಪ್ರಾಂಶುಪಾಲ ಹೊನ್ನಪ್ಪ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
      ಕಾರ್ಯಕ್ರಮಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಬೈಂದೂರು ಶಾಸಕ ಕೆ. ಲಕ್ಷ್ಮೀನಾರಾಯಣ ಅವರು ಕೆಲಕಾಲ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಹಾಡುಗಳನ್ನು ಆಲಿಸಿ ಕಲಾವಿದರಿಗೆ ಪ್ರೋತ್ಸಾಹಕ ಮಾತುಗಳನ್ನಾಡಿದರು.
   ಚಂದ್ರ ಕೆ. ಹೆಮ್ಮಾಡಿ ಸ್ವಾಗತಿಸಿದರು. ದೂರದರ್ಶನ ಕಲಾವಿದ ಎನ್, ಗಣೇಶ್ ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕ ಕೃಷ್ಣಮೂತರ್ಿ ಪಿ. ಕೆ. ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕ ಮಂಜುಣಾಥ ಹೆಬ್ಬಾರ್ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕಲಾವಿದ ಚಂದ್ರ ಕೆ. ಹೆಮ್ಮಾಡಿ ಮತ್ತು ಎನ್. ಗಣೇಶ್ ಗಂಗೊಳ್ಳಿ ಭಾವಗೀತೆ, ಭಕ್ತಿಗೀತೆ ಮತ್ತು ಜಾನಪದ ಹಾಡುಗಳನ್ನು ಪ್ರಸ್ತುತಪಡಿಸಿದರು. ಕೀಬೋಡರ್್ ವಾದಕ ಚಂದ್ರ ಬೈಂದೂರು ಮತ್ತು ತಬಲಾವಾದಕ ಗೋಪಾಲಕೃಷ್ಣ ಜೋಶಿ ಅವರು ಪಕ್ಕವಾದ್ಯದಲ್ಲಿ ಸಹಕರಿಸಿದರು.  
ನಿಮ್ಮ ಪ್ರತಿಕ್ರಿಯೆ ಬರೆಯಿರಿ
 ಕುಂದಾಪ್ರ.ಕಾಂ> editor@kundapra.com