ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕಿದೆ:ಗೋಪಾಲ ಪೂಜಾರಿ

ಕುಂದಾಪುರ: `ಕಾಂಗ್ರೆಸ್ಗೆ ಬನ್ನಿ ಬದಲಾವಣೆ ತನ್ನಿ' ಎಂಬುದರ ಅರ್ಥ, ಮತದಾರರಲ್ಲಿಗೆ ತೆರಳಿ ಪ್ರಸ್ತುತ ರಾಜ್ಯ ರಾಜಕೀಯ ಪರಿಸ್ಥಿತಿಯನ್ನು ವಿವರಿಸಿ ಅವರಲ್ಲಿ  ಜಾಗೃತೆ ಮೂಡಿಸಿ ಕಾಂಗ್ರೆಸ್ ನೊಂದಿಗೆ ಕೈಜೋಡಿಸಿ ಎಂಬುದಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಹೇಳಿದರು.
        ಅವರು ಇತ್ತೀಚೆಗೆ ಹಕ್ಲಾಡಿ ಗ್ರಾ. ಪಂ. ವ್ಯಾಪ್ತಿಯ ಬೂತ್ ಕಾಂಗ್ರೆಸ್ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೆಪಿಸಿಸಿ ಸದಸ್ಯರಾದ ಮಂಜಯ್ಯ ಶೆಟ್ಟಿ ಪದಗ್ರಹಣ ಕಾರ್ಯಕ್ರಮ ಉಧ್ಘಾಟಿಸಿದರು.
         ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಪಿಗೇಡಿ ಸಂಜೀವ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಸಭೆಯಲ್ಲಿ ಹಕ್ಲಾಡಿ ಗ್ರಾಮ ಪಂಚಾಯಿತಿ ಅಧ್ಷಕ್ಷೆ ಸುಶೀಲ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಗಾಣಿಗ, ಸದಸ್ಯ ರಘುರಾಮ ಶೆಟ್ಟಿ, ವಂಡಬಳ್ಳಿ ಜಯರಾಮ ಶೆಟ್ಟಿ, ವಂಡ್ಸೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸಾಧು.ಎಸ್.ಬಿಲ್ಲವ ಇದ್ದರು. ಇದೇ ಸಂದರ್ಭದಲ್ಲಿ ಗ್ರಾಮೀಣ ಬೂತ್ ಅಧ್ಯಕ್ಷರುಗಳನ್ನು ಸನ್ಮಾನಿಸಲಾಯಿತು. ಮಂಜು.ಆರ್.ನಾಯ್ಕ್ ಸ್ವಾಗತಿಸಿದರು. ವಂಡ್ಸೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಂತೋಷ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುನಾಥ ನೆಂಪು ನಿರೂಪಿಸಿ ಪ್ರಕಾಶ್ ಆಚಾರ್ಯ ವಂದಿಸಿದರು