ನೀಲಾವರ ಸುರೇಂದ್ರ ಅಡಿಗರಿಗೆ ಸನ್ಮಾನ

ಕುಂದಾಪುರ: ತೆಕ್ಕಟ್ಟೆಯ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕರಾಗಿ ಸೇವೆಯಲ್ಲಿರುವ ಸಾಹಿತಿ ನೀಲಾವರ ಸುರೇಂದ್ರ ಅಡಿಗರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ  ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಅಧ್ಯಾಪಕ ವೃಂದದವರ ಪರವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
  ಕುಂದಾಪುರ ಶ್ರೀ ಕುಂದೇಶ್ವರ ದೇವಳದ ಆಡಳಿತ ಧರ್ಮದಶರ್ಿ ಡಾ || ಎಚ್.ವಿ.ನರಸಿಂಹ ಮೂತರ್ಿ ಅಡಿಗ ದಂಪತಿಯನ್ನು ಸನ್ಮಾನಿಸಿದರು.
  ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿಣಿ ಶೋಭಾ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಗಣಪತಿ ಟಿ. ಶ್ರೀಯಾನ್ ಶುಭಹಾರೈಸಿದರು.
ಜಿಲ್ಲಾ ಶಿಕ್ಷಣಾಧಿಕಾರಿ ಅಶೊಕ ಕಾಮತ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಂಜುನಾಥ ಪ್ರಭು, ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಭಂಡಾರಿ ಇನ್ನಿತರರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಎಚ್. ಚಂದ್ರ ನಾಯಕ್ ಪ್ರಸ್ತಾವನೆಗೈದರು. ಶಿಕ್ಷಕ ಪಿ. ಗಣಪಯ್ಯ ಚಡಗ ಸ್ವಾಗತಿಸಿದರು. ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕ ಎಂ. ಸದಾರಾಮ ಶೆಟ್ಟಿ ವಂದಿಸಿದರು.
 
ನಿಮ್ಮ ಪ್ರತಿಕ್ರಿಯೆ ಬರೆಯಿರಿ ಕುಂದಾಪ್ರ.ಕಾಂ> editor@kundapra.com