ಕೋಡಿ: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಪೂಜಾರಿ ಭೇಟಿ

ಕುಂದಾಪುರ : ರಾಜ್ಯ ಬಂದರು ಹಾಗೂ ಒಳಸಾರಿಗೆ ಸಚಿವ, ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಂಗಳವಾರ ಕುಂದಾಪುರ ತಾಲೂಕು ಕೋಡಿ ಭಾಗಕ್ಕೆ ಭೇಟಿ ನೀಡಿದರು. 
          ಕೇಂದ್ರ ಹಾಗೂ ರಾಜ್ಯ ಮಟ್ಟದ ಬಂದರು ,ಒಳಸಾರಿಗೆ ಅಧಿಕಾರಿಗಳು ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳ ಜೊತೆಗೆ ಮಂಗಳೂರು ಹಾಗೂ ಉಡುಪಿಯಲ್ಲಿ ಪ್ರವಾಸ ಮಾಡಿದ ನಂತರ ಕೋಡಿ ಕಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿಯ ಸಮಸ್ಯೆಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಟಿ.ಎಸ್.ರಾಥೋಡ್, ಮೀನುಗಾರಿಕೆ ಇಲಾಖೆಯ ಉಪನಿರ್ಧೇಶಕ ಸುರೇಶ್ ಕುಮಾರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎನ್.ಎಂ.ಖಾರ್ವಿ, ಕಾರವಾರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾರಾಯಣಪ್ಪ, ಬಂದರು ಮತ್ತು ಒಳನಾಡು ಜಿಲ್ಲಾ ಸಾರಿಗೆ ನಿರ್ದೇಶಕ ಕ್ಯಾ. ಆರ್.ಮೋಹನ್, ಮೊದಲಾದ ಅಧಿಕಾರಿಗಳು ಹಾಗೂ ಪುರಸಭೆಯ ಅಧ್ಯಕ್ಷ ಮೋಹನದಾಸ್ ಶೆಣೈ, ದಕ್ಷಿಣ ಕನ್ನಡ ಜಿಲ್ಲಾ ಮೀನುಗಾರರ ಸಂಘದ ಅಧ್ಯಕ್ಷ ಯಶಪಾಲ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.