ಧಾರ್ಮಿಕ ಉತ್ಸವ ಆಚರಣೆ ಸಂಸ್ಕೃತಿಯ ಪ್ರತೀಕ: ಅನಂತ ಮೊವಾಡಿ

ಕುಂದಾಪುರ:  ಭಾರತವು ತನ್ನ ಭವ್ಯವಾದ ಧಾರ್ಮಿಕ ಪರಂಪರೆಯಿಂದ ವಿಶ್ವದ ಗಮನವನ್ನು ಸೆಳೆದಿರುವ ದೇಶವಾಗಿದೆ. ಭಾರತೀಯ ಹಬ್ಬ, ಆಚರಣೆಗಳು ನಮ್ಮ ವಿಶಿಷ್ಟ ಸಂಸ್ಕೃತಿಯ ಪ್ರತೀಕವಾಗಿವೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಅನಂತ ಮೊವಾಡಿ ಅವರು ಹೇಳಿದರು.
  ಹೆಮ್ಮಾಡಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ಜರಗಿದ 18ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು. ಹೆಮ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜು ಪೂಜಾರಿ ಅವರು ಅಧ್ಯಕ್ಷತೆ ವಹಿಸಿದ್ದರು.
  ಮುಖ್ಯ ಆತಿಥಿ ಕುಂದಾಪುರದ ನ್ಯಾಯವಾದಿ ರಾಘವೇಂದ್ರ ಚರಣ ನಾವಡ ಅವರು ಸಾರ್ವಜನಿಕರು ಮತ್ತು ಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸಲಾದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಫರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಿದರು. ತಾಲೂಕು ಪಂಚಾಯತ್ ಸದಸ್ಯೆ ಜಯಲಕ್ಷ್ಮೀ ರಾವ್, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ನಾಯ್ಕ್, ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ ಮೊದಲಾದವರು ಉಪಸ್ಥಿತರಿದ್ದರು.
  ಸುದರ್ಶನ ಗಾಣಿಗ ಸ್ವಾಗತಿಸಿದರು. ಸಂಜೀವ ಹೊಸಾಡು ಕಾರ್ಯಕ್ರಮ ನಿರ್ವಹಿಸಿದರು. ಸಮಿತಿ ಅಧ್ಯಕ್ಷ ರವಿ ಕೆ. ಹೆಮ್ಮಾಡಿ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಾರ್ವಜನಿಕರು ಹಾಗೂ ಶಾಲಾ ವಿದ್ಯಾಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ರಾಷ್ಟ್ರಪ್ರಶಸ್ತಿ ವಿಜೇತ ಭೃಮಾಲೋಕ ಖ್ಯಾತಿಯ ಜಾದೂಗಾರ ಸತೀಶ್ ಹೆಮ್ಮಾಡಿ ಅವರಿಂದ ಜಾದೂ ಪ್ರದರ್ಶನ ನಡೆಯಿತು.