ಕೋಡಿ ಹಬ್ಬ: ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ

ಕುಂದಾಪುರ: ಕೋಟೆಶ್ವರ ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ರಥೋತ್ಸವದ ಅಂಗವಾಗಿ ಶಾಂತಾರಾಮ ರಂಗ ಮಂಟಪದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಿದರು. ದೇವಳದ ಉತ್ಸವ ಸಮಿತಿಯ ಅಧ್ಯಕ್ಷ ಎಂ ಪ್ರಭಾಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ
ಬಿ. ಅಣ್ಣಪ್ಪ ಹೆಗ್ಡೆ, ಕುಂದಾಪುರ ಉಪ ವಿಭಾಗಾಧಿಕಾರಿ ಸದಾಶಿವ ಪ್ರಭು, ಧಾರ್ಮಿಕ ದತ್ತಿ ಇಲಾಖೆಯ ಎನ್. ಎಸ್ ದೊಡ್ಮನೆ ಉಪಸ್ಥಿತರಿದ್ದರು. ಈ ಸಂಧರ್ಭದಲ್ಲಿ ನೂತನ ಆಡಳಿತ ಮಂಡಳಿಯನ್ನು ಪರಿಚಯಿಸಲಯಿತು. ಎನ್. ಎಸ್ ದೊಡ್ಮನೆ ಸ್ವಾಗತಿಸಿ ಗುರುರಾಜ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕುಂದಾಪ್ರ.ಕಾಂ- editor@kundapra.com