ರಾಜ್ಯೋತ್ಸವ ತಾಳಮದ್ದಳೆ; ಡಾ.ಎಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರ

 ಕುಂದಾಪುರ: ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ನವೆಂಬರ್ 1ರಂದು ಜರುಗಿದ 37ನೇ ವರ್ಷದ ರಾಜ್ಯೋತ್ಸವ ತಾಳಮದ್ದಳೆ ಸಂದರ್ಭದಲ್ಲಿ ಬಡಗುತಿಟ್ಟಿನ ಖ್ಯಾತ ಚಂಡೆವಾದಕ ರಾಮಕಷ್ಣ ಮಂದಾರ್ತಿ ಅವರಿಗೆ ಡಾ.ಎಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಪ್ರದಾನ ಮಾಡಲಾಯಿತು. 
    ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿ ಡಾ.ಎಚ್.ಶಾಂತಾರಾಮ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಪ್ರಶಸ್ತಿ ಸ್ವೀಕರಿಸಿದ ಚಂಡೆವಾದಕ ರಾಮಕಷ್ಣ ಮಂದಾರ್ತಿ ಕತಜ್ಞತೆ ಅರ್ಪಿಸಿದರು. ಹಿರಿಯ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ಉಪಸ್ಥಿತರಿದ್ದರು. ಪ್ರಿನ್ಸಿಪಾಲ್ ಪ್ರೊ.ಚಂದ್ರಶೇಖರ ದೋಮ ಸ್ವಾಗತಿಸಿದರು. ಯಕ್ಷಗಾನ ಪುರಸ್ಕಾರ ಸಮಿತಿಯ ಸಂಚಾಲಕ ಡಾ.ರಮೇಶ ಚಿಂಬಾಳ್ಕರ್ ಸನ್ಮಾನಿತರನ್ನು ಪರಿಚಯಿಸಿದರು. ಕನ್ನಡ ಉಪನ್ಯಾಸಕ ಗಣಪತಿ ಭಟ್ ಕಾರ್ಯಕ್ರಮ ನಿರ್ವಹಿಸಿದರು. ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಜಿ.ಎಂ.ಗೊಂಡ ವಂದಿಸಿದರು. ಕಾರ್ಯಕ್ರಮದ ಬಳಿಕ ರಾವಣ ಮೋಕ್ಷ ಯಕ್ಷಗಾನ ತಾಳಮದ್ದಳೆ ಜರುಗಿತು.
ಕುಂದಾಪ್ರ.ಕಾಂ- editor@kundapra.com