ಸ್ವಯಂಪ್ರೇರಿತ ರಕ್ತದಾನ ಶಿಬಿರ, 96 ಯುನಿಟ್ ರಕ್ತ ಸಂಗ್ರಹ

ಕುಂದಾಪುರ: ಇಂದು ನಗರದ ಮೊಗವೀರ ಯುವ ಸಂಘಟನೆ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.), ಮಹಾಕಾಳಿ ದೇವಸ್ಥಾನ ಕುಂದಾಪುರ, ಕೊಂಕಣಿ ಖಾರ್ವಿ ಪ್ರಗತಿಪರ ಸಂಘ, ಕುಂದಾಪುರ ಪೊಲೀಸ್ ಠಾಣೆ, ಹೊಸ ಬಸ್ ಸ್ಟಾಂಡ್ ನ ರಿಕ್ಷಾ ಚಾಲಕರು ಮತ್ತು ಮಾಲಕರು ಇವರುಗಳ ಜಂಟಿ ಆಶ್ರಯದಲ್ಲಿ ರಕ್ತನಿಧಿ ಕೆ.ಎಂ.ಸಿ. ಹಾಗೂ ಉಡುಪಿ ಜಿಲ್ಲಾ ರಕ್ತನಿಧಿ ಘಟಕಗಳ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಖಾರ್ವಿಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಜರುಗಿತು.

     ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ನಾಡೋಜಾ ಡಾ.ಜಿ ಶಂಕರ್ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಕುಂದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಜಯರಾಮ್ ಡಿ. ಗೌಡ ಉಪಸ್ಥಿತರಿದ್ದರು.
      ಮಹಾಕಾಳಿ ದೇವಸ್ಥಾನ ಕುಂದಾಪುರ ಇಲ್ಲಿಯ ಅಧ್ಯಕ್ಷ ಜಯಾನಂದ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಜಯ ಸಿ. ಕೋಟ್ಯಾನ್, ಕುಂದಾಪುರ ಘಟಕದ ಗೌರವಾಧ್ಯಕ್ಷ ಪ್ರಕಾಶ ಆನಗಳ್ಳಿ, ಕುಂದಾಪುರ ಪೊಲೀಸ್ ಠಾಣೆಯ ಕ್ರೈಮ್ ವಿಭಾಗದ ಉಪನಿರೀಕ್ಷಕಿ ರೇವತಿ, ರಿಕ್ಷಾ ಚಾಲಕರು ಮತ್ತು ಮಾಲಕರು ಹೊಸ ಬಸ್ ಸ್ಟಾಂಡ್ ಕುಂದಾಪುರದ ಅಧ್ಯಕ್ಷ ಅಚ್ಚ್ಯುತ್ ಪಟೇಲ್, ಕೊಂಕಣ ಖಾರ್ವಿ ಪ್ರಗತಿಪರ ಸಂಘದ ಅಧ್ಯಕ್ಷ ಸಂಜೀವ ಖಾರ್ವಿ, ರಕ್ತನಿಧಿ ಕೆ.ಎಂ.ಸಿ. ಮಣಿಪಾಲ್ ಉಪನಿರ್ದೇಶಕಿ ಶಮಿ ಶಾಸ್ತ್ರೀ, ಉದ್ಯಮಿ ಕೆ. ಕೆ. ಕಾಂಚನ್, ಶಾಲಾ ಮುಖ್ಯೋಪಾಧ್ಯಾಯ ಲಿಂಗಪ್ಪ, ಗಣೇಶ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.
ಶಿಬಿರದಲ್ಲಿ 96 ಯುನಿಟ್ ರಕ್ತ ಸಂಗ್ರಹವಾಯಿತು.