ಕೋಡಿ ಬ್ಯಾರಿಸ್ ಕಾಲೇಜು ಕ್ರೀಡಾಕೂಟ


ಕುಂದಾಪುರ: ಇಲ್ಲಿನ ಕೋಡಿ ಬ್ಯಾರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಇತ್ತಿಚೆಗೆ ನಡೆಯಿತು. ಕೋಣಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ಎನ್ ಮಂಜುನಾಥ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಪರಿಸರದಿಂದ ಹೆಚ್ಚು ಹೆಚ್ಚು ಪ್ರತಿಭಾವಂತ ಕ್ರೀಡಾಪಟುಗಳು ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತಾಗಬೇಕೆಂದು ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಮಾಸ್ಟರ್ ಮೆಹಮೂದ್ ವಹಿಸಿದ್ದರು. ಪ್ರಾಚಾರ್ಯರಾದ ಶಮೀರ್ ವಿದ್ಯಾಥರ್ಿಗಳಿಗೆ ಶುಭ ಹಾರೈಸಿದರು. ಶ್ರೀಮತಿ ಸುಜಾತ ಶೆಟ್ಟಿ ಈ ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀಮತಿ ಪೂಣರ್ಿಮಾ ವಿ.ಶೆಟ್ಟಿ ಸ್ವಾಗತಿಸಿ, ಕುಮಾರಿ ರಮ್ಯ ವಂದಿಸಿದರು.