ಮತದಾನ ಮಾಡಲು ಯಾವುದಾದರೊಂದು ದಾಖಲೆ ಇದ್ದರೆ ಸಾಕು


ಕುಂದಾಪುರ: ಭಾರತ ಚುನಾವಣಾ ಆಯೋಗದ ಆದೇಶದಂತೆ ಮತದಾರರು ಮೇ 5ರಂದು ಮತದಾನ ಮಾಡಲು ಬರುವಾಗ ಆಯೋಗ ನೀಡಿರುವ ಮತದಾರರ ಭಾವಚಿತ್ರ ಗುರುತಿನ ಚೀಟಿ ಅಥವಾ ಈ ಕೆಳಕಂಡ ದಾಖಲೆಗಳಲ್ಲಿ ಯಾವುದಾದರು ಒಂದನ್ನು ಹಾಜರು ಪಡಿಸುವಂತೆ ಕೋರಲಾಗಿದೆ.
     ಭಾವಿಚಿತ್ರ ಸಹಿತ ಮತದಾರರ ಚೀಟಿ, ಪಾಸ್‌ಪೋರ್ಟ್, ವಾಹನ ಚಾಲನಾ ಪರವಾನಗಿ, ಆದಾಯ ತೆರಿಗೆ ಗುರುತಿನ ಚೀಟಿ, ರಾಜ್ಯ- ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ಉದ್ದಿಮೆಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ.
       ಸಾರ್ವಜನಿಕ ವಲಯದ ಬ್ಯಾಂಕ್-ಕಿಸಾನ್ ಮತ್ತು ಅಂಚೆ ಕಚೇರಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ, ಮಾನ್ಯತೆ ಪಡೆದ ನೋಂದಾಯಿತ ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೊಟ್ಟಿರುವ ಗುರುತಿನ ಚೀಟಿ, ಭಾವಚಿತ್ರವಿರುವ ನೋಂದಾಯಿತ ಡೀಡ್‌ಗಳು- ಪಟ್ಟಾಗಳು ಮುಂತಾದ ಆಸ್ತಿ ದಾಖಲೆಗಳು.
         ಭಾವಚಿತ್ರವಿರುವ ಪಡಿತರ ಚೀಟಿಗಳು, ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಪ್ರಮಾಣ ಪತ್ರಗಳು, ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಪಿಂಚಣಿ ಪಾವತಿ ಆದೇಶಗಳು ಅಥವಾ ಮಾಜಿ ಯೋಧರ ಪಿಂಚಣಿ ಪುಸ್ತಕ, ಪಿಂಚಣಿ ಸಂದಾಯ ಆದೇಶಗಳಂತಹ ಪಿಂಚಣಿ ದಾಖಲೆಗಳು, ವೃದ್ಧಾಪ್ಯ ವೇತನ ಆದೇಶಗಳು, ವಿಧವಾ ವೇತನ ಆದೇಶಗಳು, ಭಾವಚಿತ್ರವಿರುವ ಸ್ವಾತಂತ್ರ್ಯ ಯೋಧರ ಗುರುತಿನ ಚೀಟಿಗಳು, ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಶಸ್ತ್ರ ಪರವಾನಿಗೆ.
    ಅಂಗವಿಕಲರಿಗೆ ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿಗಳು, ಮಾಜಿ ಯೋಧರ ಭಾವಚಿತ್ರವಿರುವ ಸಿಎಸ್‌ಡಿ ಕ್ಯಾಂಟೀನ್ ಕಾರ್ಡ್, ಸಂಧ್ಯಾ ಸುರಕ್ಷಾ ಯೋಜನೆಯ ಭಾವಚಿತ್ರವಿರುವ ಗುರುತಿನ ಚೀಟಿ, ಭಾವಚಿತ್ರವಿರುವ ಉದ್ಯೋಗ ಕಾರ್ಡ್, ಭಾವಚಿತ್ರವಿರುವ ಯಶಸ್ವಿನಿ ಕಾರ್ಡ್, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗಳು ಇತ್ಯಾದಿ ಸ್ಥಳೀಯ ಸಂಸ್ಥೆಗಳು ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು.
      ಸರ್ಕಾರಿ ಇಲಾಖೆ ನೀಡಿರುವ ಭಾವಚಿತ್ರವಿರುವ ಹಿರಿಯ ನಾಗರಿಕರ ಗುರುತಿನ ಚೀಟಿ, ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ನೀಡಿರುವ ಕುಟುಂಬದ ಸದಸ್ಯರ ಹೆಸರು ಮತ್ತು ವಯಸ್ಸು ಹಾಗೂ ಕುಟುಂಬದ ಯಜಮಾನನೊಂದಿಗೆ ಹೊಂದಿರುವ ಸದಸ್ಯರ ಸಂಬಂಧ ಒಳಗೊಂಡ ಭಾವಚಿತ್ರ ಇರುವ ತಾತ್ಕಾಲಿಕ- ಮೂಲ ಪಡಿತರ ಚೀಟಿ, ಭಾವಚಿತ್ರವಿರುವ ಆರೋಗ್ಯ ವಿಮಾ ಯೋಜನೆ ಸ್ಮಾರ್ಟ್ ಕಾರ್ಡ್‌ಗಳು.
        
         ಈ ಮೇಲಿನ ಯಾವುದೇ ಒಂದು ಗುರುತಿನ ಚೀಟಿಯನ್ನು ಹಾಜರುಪಡಿಸಿ ಮತದಾನ ಮಾಡಬಹುದು ಎಂದು ಜಿಲ್ಲಾಧಿಕಾರಿ ಡಾ.ಎಂ.ಟಿ.ರೇಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Any one of the bellow proof is enough for voting,
Kundapura assembly election candidates
Byndoor assembly election candidates