ಭವಿಷ್ಯತ್ತಿಗಾಗಿ ಯೋಗ- 2013. ಗಿನ್ನೆಸ್ ದಾಖಲೆಗೆ ಸಜ್ಜು

ಕುಂದಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ  ಉಡುಪಿ  ಮತ್ತು ದ.ಕನ್ನಡ ಜಿಲ್ಲೆಯಲ್ಲಿ ಏಕ ಕಾಲದಲ್ಲಿ 71,717 ವಿದ್ಯಾರ್ಥಿಗಳು ಸಾಮೂಹಿಕ ಯೋಗಾಭ್ಯಾಸ ನಡೆಸುವ ಮೂಲಕ ಗಿನ್ನೆಸ್ ದಾಖಲೆ ಮಾಡುವ ಭವಿಷ್ಯತ್ತಿಗಾಗಿ ಯೋಗ- 2013 ಕಾರ್ಯಕ್ರಮದ ಭಾಗವಾಗಿ ಡಿ.11ರ ಬೆಳಿಗ್ಗೆ ಕುಂದಾಪುರದ ಗಾಂಧಿಮೈದಾನದಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ಜರುಗಿತು.
  ಕುಂದಾಪುರದಿಂದ 2281 ವಿದ್ಯಾರ್ಥಿಗಳು ಭಾಗವಹಿಸಿ ಸಾಮೂಹಿಕ ಯೋಗ ಪ್ರದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಸೂರ್ಯ ನಮಸ್ಕಾರ ಮತ್ತು ನಾನಾ ಆಸನಗಳ ಬೃಹತ್ ಯೋಗ ಪ್ರಾತ್ಯಕ್ಷಿಕೆ ನಡೆಯಿತು. 

Photos by: Shekar Ajekar
ನಿಮ್ಮ ಅಭಿಪ್ರಾಯ ಬರೆಯಿರಿ
 ಕುಂದಾಪ್ರ ಡಾಟ್ ಕಾಂ- editor@kundapra.com