ಕುಂದಾಪುರ: ಸ್ಯಾಕ್ಸೋಫೋನ್ ವಾದನದಲ್ಲಿ ಅಪ್ರತಿಮ ಪ್ರೌಢಿಮೆ ತೋರಿಸಿ ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದ ಪ್ರತಿಭಾವಂತ ಸ್ಯಾಕ್ಸೋಪೋನ್ ವಾದಕಿ ಸಾಲಿಗ್ರಾಮದ ಮೇಘನಾ ಅವರಿಗೆ 'ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ - 2013'ನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ದೆಹಲಿ ದೂರದರ್ಶನ ಕೇಂದ್ರದ ಹೆಚ್ಚುವರಿ ಮಹಾ ನಿರ್ದೇಶಕ ನಾಡೋಜ ಡಾ| ಮಹೇಶ್ ಜೋಶಿ ಪ್ರಶಸ್ತಿ ಪ್ರಧಾನ ಮಾಡಿದರು.
ಸುಪ್ರಿಂಕೋರ್ಟನ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಡಾ. ಶಿವರಾಜ್ ವಿ. ಪಾಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಧಾನ ಪರಿಷತ್ ಸಭಾಪತಿ ಡಿ. ಎಚ್. ಶಂಕರಮೂರ್ತಿ, ಕನ್ನಡಪ್ರಭ ಪತ್ರಿಕೆಯ ಸಂಪಾದಕ ವಿಶ್ವೇಶ್ವರ್ ಭಟ್, ಆರ್ಯಭಟ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ| ಎಚ್.ಎಲ್.ಎನ್. ರಾವ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮೇಘನಾ ಸಾಲಿಗ್ರಾಮ ಸ್ಯಾಕ್ಸೋಫೋನ್ ವಾದಕ ಅಲೆವೂರು ಸುಂದರ ಶೇರೇಗಾರ ಅವರ ಶಿಷ್ಯೆಯಾಗಿದ್ದು, ದೇಶ ವಿದೇಶಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದಾರೆ.
Meghana Saligrama got Aryabhata Internal National award 2013

ನಿಮ್ಮ ಅಭಿಪ್ರಾಯ ಬರೆಯಿರಿ
ಕುಂದಾಪ್ರ ಡಾಟ್ ಕಾಂ- editor@kundapra.com