ಕುಂದಾಪುರದಲ್ಲಿ ಚುರುಕುಗೊಂಡ ಮತ ಏಣಿಕೆ: ನಿರ್ಧಾರಗೊಳ್ಳಿತ್ತಿದೆ ಅಭ್ಯರ್ಥಿಗಳ ಭವಿಷ್ಯ

ಕುಂದಾಪುರ: ತಾಲೂಕಿನ 62 ಗ್ರಾ.ಪಂ ನಡೆದ ಚುನಾವಣಾ ಫಲಿತಾಂಶ ಇಂದು ಹೊರಬಿಳುತ್ತಿದ್ದು ಮತದಾರರಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದೆ. ಇಂದು ಬೆಳಿಗ್ಗೆಯಿಂದಲೇ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಮತ ಎಣಿಕೆಯ ಕ್ಷೇತ್ರದ ಸುತ್ತಲೂ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಭಾರಿ ಸಂಖ್ಯೆಯಲ್ಲಿ ನೆರೆದಿದ್ದಾರೆ.
ಬೆಳಿಗ್ಗೆ 11:40ಕ್ಕೆ ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದ 55 ಗ್ರಾಮ ಪಂಚಾಯತುಗಳ 125 ಕ್ಷೇತ್ರಗಳ ಮತ ಎಣಿಕೆ ಪೂರ್ಣಗೊಂಡಿದೆ. 
ಮತ ಎಣಿಕೆಯ ಕೇಂದ್ರದ ಸುತ್ತಲೂ 144 ಸೆಕ್ಷನ್ ಜಾರಿ ಮಾಡಲಾಗಿದ್ದು ಬೀಗಿ ಪೊಲೀಸ್ ಬಂದೋವಸ್ತ್ ಏರ್ಪಡಿಸಲಾಗಿದೆ. 

ಕುಂದಾಪ್ರ ಡಾಟ್ ಕಾಂ- editor@kundapra.com