ಫೆ. 3 ರಂದು ಮಾಜಿ ಶಾಸಕ ಎ.ಜಿ. ಕೊಡ್ಗಿಯವರಿಗೆ ಕೋ.ಮ.ಕಾರಂತ ಪ್ರಶಸ್ತಿ ಸಮಾರಂಭ

 ಕುಂದಾಪ್ರ ಡಾಟ್ ಕಾಂ ಸುದ್ದಿ.

ಕುಂದಾಪುರ: ಕುಂದಪ್ರಭ ಸಂಸ್ಥೆಯ ವತಿಯಿಂದ ಮಾಜಿ ಶಾಸಕ ಎ.ಜಿ. ಕೊಡ್ಗಿಯವರಿಗೆ ಕೋ.ಮ. ಕಾರಂತ ಪ್ರಶಸ್ತಿಯನ್ನು ಫೆಬ್ರವರಿ 3 ರಂದು ಗುರುವಾರ ಪ್ರದಾನ ಮಾಡಲು ನಿರ್ಧರಿಸಲಾಗಿದೆ.ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಂಜೆ ೪.೩೦ಕ್ಕೆ ಸಮಾರಂಭ ನಡೆಯಲಿದೆ. ಸ್ವಾತಂತ್ರ್ಯದ ಅಮೃತಮಹೋತ್ಸವದ ವರ್ಷದಲ್ಲಿ ಮಾನ್ಯ ಎ.ಜಿ.ಕೊಡ್ಗಿಯವರು ಸಹಿತ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹಲವು ಸ್ವಾತಂತ್ರ್ಯಯೋಧರ ಮನೆ ಯವರನ್ನು ಗೌರವಿಸಲಾಗುತ್ತದೆ ಎಂದು ಕುಂದಪ್ರಭ ಸಂಸ್ಥೆಯ ಅಧ್ಯಕ್ಷ ಯು.ಎಸ್. ಶೆಣೈ ತಿಳಿಸಿದ್ದಾರೆ.