ಕಾಂಗ್ರೆಸ್ ಸೋಶಿಯಲ್ ಮೀಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮತ್ತೊಂದು ಅವಧಿಗೆ ಚಂದ್ರಶೇಖರ ಶೆಟ್ಟಿ

 ಕುಂದಾಪ್ರ ಡಾಟ್ ಕಾಂ ಸುದ್ದಿ.

ಕುಂದಾಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಅನುಮೋದನೆಯ ಮೇರೆಗೆ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಶೆಟ್ಟಿಯವರನ್ನು ನೇಮಕ ಮಾಡಿ ಆದೇಶಿಸಲಾಗಿದೆ ಎಂದು ಕಾಂಗ್ರೆಸ್ ಸೋಶಿಯಲ್ ಮೀಡಿಯಾ ರಾಜ್ಯಾಧ್ಯಕ್ಷರಾದ ಬಿ.ಆರ್ ನಾಯ್ಡು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾಂಗ್ರೆಸ್ ಐ.ಟಿ ಸೆಲ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ 2014ರಿಂದ ನಿರಂತರವಾಗಿ 2021ರ ತನಕ ಕಾರ್ಯನಿರ್ವಹಿಸಿ, ಪಕ್ಷದ ನಾಯಕತ್ವದ ಮೆಚ್ಚುಗೆಗೆ ಪಾತ್ರರಾಗಿರುವ ಇವರಿಗೆ 2021ರಲ್ಲಿ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿಯ ಜವಾಬ್ದಾರಿಯನ್ನು ನೀಡಲಾಗಿತ್ತು. ಇದೀಗ ಅದೇ ಹುದ್ದೆಯನ್ನು ಮತ್ತೊಂದು ಅವಧಿಗೆ ಮುಂದುವರಿಸಿ ಆದೇಶ ನೀಡಲಾಗಿದೆ.