ಸಿಎಸ್ ಪರೀಕ್ಷೆಯಲ್ಲಿ ಕುಂದಾಪುರ ಶಿಕ್ಷ ಪ್ರಭಾ ಅಕಾಡೆಮಿ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ/ಸಿಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆ (ಸ್ಪೇಸ್) ಇದರ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಜನವರಿ 2022 ರಲ್ಲಿ ನಡೆಸಿದ ಸಿಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆ ಬರೆದ  6 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ತೇರ್ಗಡೆ ಹೊಂದುವುದರ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿದ್ದಾರೆ. 
ಸಂಸ್ಥೆಯ ವಿದ್ಯಾರ್ಥಿಗಳಾದ ಮಿಥುನ್ ಪೂಜಾರಿ (157), ಸುಜನ್ (148), ಸಂಜನಾ (146), ಅವಿನ್ ಕೆ ಎ (142) ಮತ್ತು ಶ್ರೇಯಸ್ ಎಮ್ ಆರ್ (139) ಅಂಕಗಳೊಂದಿಗೆ ಸಿಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆ ಹೊಂದಿರುತ್ತಾರೆ. 

ಶಿಕ್ಷ ಪ್ರಭ ಅಕಾಡೆಮಿಯು ಸಿಎ/ಸಿಎಸ್ ಪರೀಕ್ಷೆಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ ಬಂದಿದ್ದು ಸಂಸ್ಥೆಯ ಅನೇಕ ವಿದ್ಯಾರ್ಥಿಗಳು ಸಿಎ/ಸಿಎಸ್ ಪರೀಕ್ಷೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಗೈದು ಉನ್ನತ ಹುದ್ದೆಯಲ್ಲಿದ್ದಾರೆ.