ಕೋಟ: ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಕೋಟ ಬೊಬ್ಬರ್ಯನಕಟ್ಟೆ ಸಮೀಪ ಸಂಭವಿಸಿದೆ.
ಕೋಟಿ ಗಿಳಿಯಾರು ನಿವಾಸಿ, ಲಾರಿ ಲೋಡರ್ ಕೆಲಸ ನಿರ್ವಹಿಸುತ್ತಿದ್ದ ಕೃಷ್ಣ ದೇವಾಡಿಗ (60) ಮೃತಪಟ್ಟ ದುರ್ದೈವಿ.
ಉಡುಪಿ ಕಡೆಯಿಂದ ಕುಂದಾಪುರದತ್ತ ಸಂಚರಿಸುತ್ತಿದ್ದ ಕಾರು, ರಸ್ತೆ ದಾಟಲು, ನಿಂತಿದ್ದ ಕೃಷ್ಣ ದೇವಾಡಿಗ ಅವರಿಗೆ ಢಿಕ್ಕಿ ಹೊಡೆಯಿತು. 'ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ಅವರನ್ನು 'ಜೀವನ್ ಮಿತ್ರ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ಹತ್ತಿ,ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಘಟನೆಯ ಮಾಹಿತಿ ತಿಳಿದು ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
