ಬೆಳಿಗ್ಗೆ ಶ್ರೀಗಳು ಶ್ರೀ ವೆಂಕಟರಮಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ಸನ್ನಿಧಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಾಸಾವಧಿ ಅಖಂಡ ಭಜನಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ಮತ್ತು ತಾಂತ್ರಿಕ ಜಿ. ವಸಂತ ಭಟ್ ನೇತೃತ್ವದಲ್ಲಿ ಜರಗಿತು.
ಪುರುಷೋತ್ತಮ ಮಾಸದ ಅಂಗವಾಗಿ ಬೆಳಿಗ್ಗೆ ಪುರುಷೋತ್ತಮ ಅಷ್ಟೋತ್ತರದಿಂದ ಶ್ರೀದೇವರಿಗೆ 108 ಪ್ರದಕ್ಷಿಣಾ ಸೇವೆ, ಮಧ್ಯಾಹ್ನ ಅಪೂಪದಾನ ದೀಪದಾನ ಸೇವೆ, ಉಭಯ ದೇವರಿಗೆ ಮಹಾಪೂಜೆ, ಮಹಾಸಮಾರಾಧನೆ, ಸಂಜೆ ಉಭಯ ದೇವರ ಸನ್ನಿಧಿಯಲ್ಲಿ ದೀಪಾರಾಧನೆ ಸೇವೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು.
ದೇವಸ್ಥಾನದ ಆಡಳಿತ ಮೊಕ್ತೇಸರ ಎನ್. ಸದಾಶಿವ ನಾಯಕ್, ಜಿ. ವೆಂಕಟೇಶ ನಾಯಕ್, ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ವೈದಿಕರು, ಊರಿನ ಹತ್ತು ಸಮಸ್ತರು, ಊರ ಪರ ಊರಿನ ಸಮಾಜ ಬಾಂಧವರು, ಸೇವಾದಾರರು ಮೊದಲಾದವರು ಉಪಸ್ಥಿತರಿದ್ದರು.
ಜೂ.16ರಂದು ಬೆಳಿಗ್ಗೆ ದೀಪ ವಿಸರ್ಜನೆಯೊಂದಿಗೆ ಮಾಸಾವಧಿ ಅಖಂಡ ಭಜನಾ ಮಹೋತ್ಸವ ಮುಕ್ತಾಯಗೊಳ್ಳಲಿದ್ದು, ಈ ಮಹೋತ್ಸವದಲ್ಲಿ ರಾಜ್ಯ ಮತ್ತು ಹೊರರಾಜ್ಯಗಳಿಂದ ವಿವಿಧ ಭಜನಾ ಮಂಡಳಿಗಳು ಹಾಗೂ ಕಲಾವಿದರು ಆಗಮಿಸಿ ಭಜನಾ ಸೇವೆ ಸಮರ್ಪಿಸಲಿದ್ದಾರೆ.
