ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾರ್ಷಿಕ ಬಹುಮಾನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಯಶಸ್ಸು ಎನ್ನುವುದು ಶಿಸ್ತು,  ಶೃದ್ಧೆ ಮತ್ತು ಸತತ ಪ್ರಯತ್ನದಿಂದ ಬರುತ್ತದೆ ಎಂದು ಕುಂದಾಪುರದ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಅಭಿಪ್ರಾಯಪಟ್ಟರು. 

ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಶಿಕ್ಷಣದ ಜೊತೆಗೆ ಮೌಲ್ಯಯುತ ಶಿಕ್ಷಣ ಪಡೆಯುವುದು ಅಷ್ಟೇ ಮುಖ್ಯವಾಗುತ್ತದೆ. ಜೀವನದ  ಸೋಲುಗಳು ಹೊಸ ಪಾಠವನ್ನು ಕೊಡುತ್ತದೆ. ಹೊಸ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತವೆ. ತುಂಬಾ ಬದಲಾವಣೆಗಳಾಗುತ್ತವೆ.  ನೀವು ಇಡುವ  ಪ್ರತಿ ಒಳ್ಳೆಯ ಹೆಜ್ಜೆಗಳು ಎಲ್ಲವನ್ನೂ ಕೊಡುತ್ತದೆ. ನಿಮ್ಮ  ಬದುಕಿನ  ನೆಲೆಗಳನ್ನು ಕಲಿಸಿದ ಸಂಸ್ಥೆಯ ಕುರಿತು ಒಳ್ಳೆಯದನ್ನು  ಅಭಿಪ್ರಾಯವನ್ನು ಕೊಡಿ. ಪೋಷಕರಿಗೆ ಗೌರವಿಸಿ. ಉತ್ತಮ ಫಲಿತಾಂಶ ಪಡೆದು ಬದುಕನ್ನು ರೂಪಿಸಿಕೊಳ್ಳಿ ಎಂದು ಕರೆ ನೀಡಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. 

ತರಗತಿಯಲ್ಲಿ ಉತ್ತಮ ಅಂಕ ಪಡೆದವರು ಮತ್ತು ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. 

ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕಿ ಸ್ನೇಹ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಶಂಕರನಾರಾಯಣ ಆಟೋಟ ಸ್ಪರ್ಧೆಗಳ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.  ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಪಟ್ಟಿಯನ್ನು ವಾಣಿಜ್ಯ ಉಪನ್ಯಾಸಕಿ ಸುಮಾ ವಾಚಿಸಿದರು. ಸೂಕ್ಮಾಣು ಜೀವಶಾಸ್ತ್ರ ಉಪನ್ಯಾಸಕಿ ವಿದ್ಯಾರಾಣಿ ವಂದಿಸಿದರು.