ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಹಾಗೂ ನ್ಯಾಷನಲ್ ಕೆಡೆಟ್ ಕಾರ್ಪ್ ಆಶ್ರಯದಲ್ಲಿ ಪುರಸಭೆ ಕುಂದಾಪುರ ಇವರ ಸಹಯೋಗದೊಂದಿಗೆ ಕುಂದಾಪುರದಲ್ಲಿ ಬೃಹತ್ ಸ್ವಚ್ಛತಾ ಆಂದೋಲನ ಕಾರ್ಯಕ್ರಮವು ನಡೆಯಿತು.
ಈ ಕಾರ್ಯಕ್ರಮದಲ್ಲಿ ಕುಂದಾಪುರ ಪುರಸಭೆಯ ಪರಿಸರ ಅಭಿಯಂತರರು ಗುರುಪ್ರಸಾದ್ ಶೆಟ್ಟಿ, ಹಿರಿಯ ಆರೋಗ್ಯ ನಿರೀಕ್ಷಕ ರಾಘವೇಂದ್ರ ನಾಯ್ಕ್, ಪುರಸಭೆಯ ಸಿಬ್ಬಂದಿ ವರ್ಗ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ, ಪೂಜಾ ಕುಂದರ್ ಹಾಗೂ ಎನ್.ಎಸ್.ಎಸ್. ಸ್ವಯಂಸೇವಕರು ಉಪಸ್ಥಿತರಿದ್ದರು.
