ಬೈಂದೂರಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘದಿಂದ ಸ್ವಚ್ಛತಾ ಆಂದೋಲನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಡಾ. ಬಿ. ಆರ್. ಅಂಬೇಡ್ಕರ್ ಮಹಿಳಾ ಸಂಘ ರಿ. ಬೈಂದೂರು ಇವರ ವತಿಯಿಂದ ತಾಲೂಕಿನ ವಿವಿಧ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಂತ ಯಶಸ್ವಿಯಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಬೈಂದೂರಿನ ರತ್ತು ಬಾಯಿ ಜನತಾ ಪ್ರೌಢ ಶಾಲಾ ವಠಾರದಿಂದ ಆರಂಭಗೊಂಡ ಈ ಸ್ವಚ್ಛತಾ ಅಭಿಯಾನವು, ಪ್ರಮುಖ ರಸ್ತೆಯ ಮೂಲಕ ಬಸ್ ನಿಲ್ದಾಣದವರೆಗೆ ಹಾಗೂ ತಹಶೀಲ್ದಾರ್ ಕಚೇರಿಯ ಆವರಣದಾದ್ಯಂತ ಅತ್ಯಂತ ವ್ಯವಸ್ಥಿತವಾಗಿ ನಡೆಯಿತು. ಸಂಘದ ಸದಸ್ಯರು  ಶ್ರಮದಾನದ ಮೂಲಕ  ಸಾರ್ವಜನಿಕ ಪ್ರದೇಶವನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.

ಕಾರ್ಯಕ್ರಮಕ್ಕೆ ಚಾಲನೆ:
ಈ ಮಾದರಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಬೈಂದೂರು ತಾಲೂಕು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಇದರ ಸಂಚಾಲಕರಾದ ಶಿವರಾಜ್ ಬೈಂದೂರು, ಜಿಲ್ಲಾ ನಾಯಕರಾದ ಸುರೇಶ್ ಬಾರ್ಕೂರು ಹಾಗೂ ಅಂಬೇಡ್ಕರ್ ಯುವಕ ಸಂಘದ ದಯಾನಂದ ಪಿ. ಅವರು ಜಂಟಿಯಾಗಿ ಚಾಲನೆ ನೀಡಿ, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಮಹಿಳಾ ಒಕ್ಕೂಟದ ಸದಸ್ಯರಾದ ಗೀತಾ ಎಸ್., ಬೈಂದೂರು ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷರಾದ ವಿನಯ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘ ರಿ. ಬೈಂದೂರು ಇದರ ಅಧ್ಯಕ್ಷರಾದ ಸುಶೀಲಾ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು, ದಲಿತ ಸಂಘರ್ಷ ಸಮಿತಿಯ ಮುಖಂಡರು ಹಾಗೂ ಅಂಬೇಡ್ಕರ್ ಮಹಿಳಾ ಸಂಘದ  ಆಸಕ್ತ ಸದಸ್ಯರು ಸಕ್ರಿಯವಾಗಿ ಭಾಗವಹಿಸಿ, ಶ್ರಮದಾನವನ್ನು ಯಶಸ್ವಿಗೊಳಿಸಿದರು.

 "ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಮಹಿಳಾ ಸಂಘಟನೆಯ ಈ ಕಾರ್ಯ ಶ್ಲಾಘನೀಯ," ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು ಅಭಿಪ್ರಾಯಪಟ್ಟರು.