ಉಡುಪಿ: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕ/ಸಂಪನ್ಮೂಲ ವ್ಯಕ್ತಿಯಾಗಿ ಬೋಧನೆ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಗೌರವ ಸಂಭಾವನೆ ಆಧಾರದ ಮೇಲೆ ಷರತ್ತು ಹಾಗೂ ನಿಬಂಧನೆಗಳನ್ವಯ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ವಿಷಯಗಳು:
ಅನ್ವಯಿಕ ಕಲೆ, ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಛಾಯಾಗ್ರಹಣ, ಕಲಾ ಇತಿಹಾಸ, ಕನ್ನಡ, ಇಂಗ್ಲಿಷ್, ಭಾರತೀಯ ಸಂವಿಧಾನ, ಪರಿಸರ ಅಧ್ಯಯನ.
ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ತಮ್ಮ ಬಯೋಡೇಟಾ ಮತ್ತು ಅಗತ್ಯ ದಾಖಲೆಗಳೊಂದಿಗೆ (ವಿದ್ಯಾರ್ಹತೆ, ಅನುಭವ) ಕಾವಾ ಕಚೇರಿಗೆ ಅಂಚೆ ಮೂಲಕ ಅಥವಾ ನೇರವಾಗಿ ಅರ್ಜಿ ಸಲ್ಲಿಸಬಹುದು. ಮೇ 15 ರಂದು ಅರ್ಜಿ ಸ್ವೀಕರಿಸಲು ಕೊನೆಯ ದಿನವಾಗಿದ್ದು, ಮೇ. 19 ರಂದು ಬೆಳಿಗ್ಗೆ 11.00 ಗಂಟೆಗೆ ಸಂಸ್ಥೆಯಲ್ಲಿ ಸಂದರ್ಶನ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.mysore.nic.in ಅಥವಾ www.cavamysore.karnataka.gov.in ಅಥವಾ ದೂ.ಸಂ: 0821-2438931 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾವಾ ಪ್ರಕಟಣೆ ತಿಳಿಸಿದೆ.
