ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರೆಡ್ ಕ್ರಾಸ್ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದಲ್ಲಿ ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕ ಆಶ್ರಯದಲ್ಲಿ "ರೆಡ್ ಕ್ರಾಸ್ ದಿನಾಚರಣೆ- 2026" ಕಾರ್ಯಕ್ರಮ ನಡೆಯಿತು. 

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಛೇರ್ಮನ್ ಜಯಕರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜಕ್ಕೆ ಕೈಲಾದ ಸಹಾಯ ಮಾಡಬೇಕು ಎಂದು ಹೇಳಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. 

ವೇದಿಕೆಯಲ್ಲಿ ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ , ಕಾರ್ಯಕ್ರಮ ಸಂಯೋಜಕಿ ವಿದ್ಯಾ ರಾಣಿ ಉಪಸ್ಥಿತರಿದ್ದರು. 

ವಿದ್ಯಾರ್ಥಿನಿಯರಾದ ಪಲ್ಲವಿ ಕಾರ್ಯಕ್ರಮ ನಿರೂಪಿಸಿ, ವೈಭವಿ ಸೂರ್ಯ ವಂದಿಸಿದರು.