ಅವರು ಮಂಗಳವಾರ ಕೋಟ ಪಂಚಾಯತ್ ಸಭಾಂಗಣದಲ್ಲಿ ಕೋಟ ಪಂಚಾಯತ್, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮಾಹಿತಿ ಕೇಂದ್ರ ಕೋಟ, ಪಂಚವರ್ಣ ಸಂಘಟನೆ ಕೋಟ, ಇಂಡಿಕಾ ಕಲಾ ಬಳಗ ಪಡುಕರೆ, ಪ್ರಕೃತಿ ಸಂಜೀವಿ ಒಕ್ಕೂಟ ಕೋಟ ಇವರುಗಳ ಆಶ್ರಯದಲ್ಲಿ ಐದು ದಿನಗಳ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳಿಗೆ ಶಿಬಿರಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ ಇಂತಹ ಶಿಬಿರಗಳಲ್ಲಿ ಹೆಚ್ಚು ಹೆಚ್ಚು ಮಕ್ಕಳು ಪ್ರಯೋಜನ ಪಡೆಯುವಂತ್ತಾಗಲಿ ಎಂದು ಹಾರೈಸಿದರು.
ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಕೆ.ರಾಜಾರಾಂ ಐತಾಳ್ ಭಾಗವಹಿಸಿದರು.
ಸಭೆಯ ಅಧ್ಯಕ್ಷತೆಯನ್ನು ಕೋಟಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ವಹಿಸಿ ಸ್ವಾಗತಿಸಿದರು.
ಸಭೆಯಲ್ಲಿ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಇಂಡಿಕಾ ಕಲಾ ಬಳಗದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಪ್ರಕೃತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮಾಲತಿ ಶೇಖರ್ ಉಪಸ್ಥಿತರಿದ್ದರು.
ಪಂಚವರ್ಣದ ರವೀಂದ್ರ ಕೋಟ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಪಂಚಾಯತ ಲೆಕ್ಕಾಧಿಕಾರಿ ಶೇಖರ್ ಮರವಂತೆ ನಿರೂಪಿಸಿ, ಕಾರ್ಯದರ್ಶಿ ಜಲಜಾಕ್ಷಿ ವಂದಿಸಿದರು.
