ಉಪ್ಪುಂದ ದೇವಾಡಿಗರ ಸಂಘದ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದ ದೇವಾಡಿಗರ ಸಂಘ ರಿ. ಇದರ 2026-28ರ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಅದ್ದೂರಿಯಾಗಿ ಜರಗಿತು.  

ಸಂಘದ ಅಧ್ಯಕ್ಷರಾದ ರವೀಂದ್ರ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ನೂತನ ಅಧ್ಯಕ್ಷರಾಗಿರುವ ರಾಮಚಂದ್ರ ದೇವಾಡಿಗರು ಅಧಿಕಾರ ಸ್ವೀಕರಿಸಿದರು.

ಮುಖ್ಯ ಅತಿಥಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಮಹಿಳಾ ಅಧ್ಯಕ್ಷರಾದ ಸುಶೀಲಾ ಕಟ್ಟೆಮನೆ, ಕಾರ್ಯದರ್ಶಿ ರಾಧ ದೇವಾಡಿಗ, ನೂತನ ಮಹಿಳಾ ಘಟಕ ಅಧ್ಯಕ್ಷರಾದ ಗಿರಿಜಾ ದೇವಾಡಿಗ, ಕಾರ್ಯದರ್ಶಿ ಸೀತು ಮಹಾಬಲೇಶ್ವರ ಉಪಸ್ಥಿತರಿದ್ದರು.

ರಾಮಕೃಷ್ಣ ದೇವಾಡಿಗ ಕಾರ್ಯಕ್ರಮ ವನ್ನು ನಿರೂಪಿಸಿ, ಕಾರ್ಯದರ್ಶಿ ಸುಧಾಕರ ದೇವಾಡಿಗ ಸ್ವಾಗತಿಸಿ, ಕಾರ್ಯದರ್ಶಿ ಮಂಜುನಾಥ ದೇವಾಡಿಗ ವಂದಿಸಿದರು.