ಕೋಟ ಪಡುಕರೆ ಕಾಲೇಜಿಗೆ ಕರ್ಣಾಟಕ ಬ್ಯಾಂಕ್ ಗಣಕ ಯಂತ್ರ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೋಟ-ಪಡುಕರೆ ಇಲ್ಲಿಗೆ ಕರ್ಣಾಟಕ ಬ್ಯಾಂಕ್‌ನ ಸಿ.ಎಸ್.ಆರ್ ಯೋಜನೆಯಡಿ ಕಾಲೇಜಿಗೆ ಸುಮಾರು 8.50 ಲಕ್ಷ ರೂಪಾಯಿ ಮೌಲ್ಯದ ಗಣಕಯಂತ್ರಗಳನ್ನು ಗಣಕ ಯಂತ್ರವನ್ನು ಕರ್ಣಾಟಕ ಬ್ಯಾಂಕ್ ಪ್ರಾದೇಶಿಕ ಕಚೇರಿ ಉಡುಪಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರಮೇಶ್ ವೈದ್ಯ ಅವರು ಗಣಕಯಂತ್ರಗಳನ್ನು ಕಾಲೇಜಿಗೆ ಹಸ್ತಾಂತರಿಸಿ ಅದನ್ನು ಲೋಕಾರ್ಪಣೆಗೊಳಿಸಲಾಯಿತು.

ಗಣಕಯಂತ್ರಯನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ, ಉಪನ್ಯಾಸಕ ಶಂಕರ್ ನಾಯ್ಕ್, ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮಮತಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಮೇಶ್ ಆಚಾರ್, ಐಕ್ಯೂಎಸಿ ಸಂಚಾಲಕರಾದ ಸುಬ್ರಹ್ಮಣ್ಯ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸುರೇಶ್ ಪೂಜಾರಿ ಹಾಗೂ ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಸಾದ್ ಬಿಲ್ಲವ, ಕರ್ಣಾಟಕ ಬ್ಯಾಂಕ್ ಕೋಟ ಶಾಖಾ ಪ್ರಭಂದಕ ಗುರುರಾಜ್ ಸರಳಾಯ, ಕ್ಲಸ್ಟರ್ ಹೆಡ್ ಪ್ರಕಾಶ್ಚಂದ್ರ ಶೆಟ್ಟಿ ಇದ್ದರು.