ರೈತರೆಡೆಗೆ ನಮ್ಮ ನಡಿಗೆ 54ನೇ ಸರಣಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 54ರ ಸರಣಿಯ ಕಾರ್ಯಕ್ರಮದ ಅಂಗವಾಗಿ ಸಾಧಕ ಕೃಷಿಕರ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಮೇ.23ರ ಶನಿವಾರ ಸಂಜೆ 4.45ಕ್ಕೆ ನಡೆಯಲಿದೆ.

ಮಣೂರು ಯುವ ಕೃಷಿಕ ಚಂದ್ರಕಾಂತ್ ಮಧ್ಯಸ್ಥ ಅವರಿಗೆ ಕೃಷಿ ಯುವ ಪುರಸ್ಕಾರ ನೀಡಿ ಗೌರವಿಸಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.